ಜುಲೈ 25 ರಂದು ಧರ್ಮಸಂಸದ್ ಪೂರ್ವಭಾವಿ ಸಭೆ

ಸೆಪ್ಟೆಂಬರ್ 3 ರಂದು ಧರ್ಮಸ್ಥಳ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದಲ್ಲಿ ನಡೆಯಲಿರುವ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ದಶಮಾನೋತ್ಸವ ಹಾಗೂ ರಾಷ್ಟ್ರೀಯ ಧರ್ಮಸಂಸದ್ ಕಾರ್ಯಕ್ರಮದ ಪೂರ್ವಭಾವಿ ಸಭೆಯು 25-7-2018 ರಂದು ಮಂಗಳೂರು ಕದ್ರಿ ಗೋರಕ್ಷನಾಥ ಜ್ಞಾನ ಮಂದಿರದಲ್ಲಿ ನಡೆಯಿತು.

ಈ ಸಭೆಯಲ್ಲಿ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಒಡಿಯೂರು ಶ್ರೀ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ, ರೇಣುಕಾನಂದ ಸ್ವಾಮೀಜಿ, ಈಶವಿಠಲದಾಸ ಸ್ವಾಮೀಜಿ, ಶಶಿಕಾಂತ ಮಣಿ ಸ್ವಾಮೀಜಿ, ವಿಖ್ಯಾತಾನಂದ ಸ್ವಾಮೀಜಿ, ಶಾಸಕರಾದ ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ, ಹರೀಶ್ ಪೂಂಜಾ, ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.