ರಾಷ್ಟ್ರೀಯ ಧರ್ಮ ಸಂಸದ್ ಉದ್ಘಾಟನೆ

ಬೆಳ್ತಂಗಡಿ : ಕನ್ಯಾಡಿಯ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯ ಪಟ್ಟಾಭಿಷೇಕದ ದಶಮಾನೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾಗಿರುವ ರಾಷ್ಟ್ರೀಯ ಧರ್ಮ ಸಂಸತ್-2018 ಇಂದು ಬೆಳಗ್ಗೆ ಉದ್ಘಾಟನೆಗೊಂಡಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಧರ್ಮ ಸಂಸತ್ತಿನ ಅಧ್ಯಕ್ಷತೆ ವಹಿಸಿದ್ದರು. ಸಮಾವೇಶವನ್ನು ಜುನಾ ಅಖಾಡದ ಮಹಾಂತೇಶ ದೇವಾನಂದ ಸರಸ್ವತಿ ಸ್ವಾಮೀಜಿ ಉದ್ಘಾಟಿಸಿದರು.

ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್, ಸಂಸದ ನಳಿನ್ ಕುಮಾರ್ ಕಟೀಲು, ವಿವಿಧ ಮಠಗಳ ಸ್ವಾಮೀಜಿಗಳು, ಸಾಧುಸಂತರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕನ್ಯಾಡಿಯ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿದರು.